ಮಕ್ಕಳ ಮಾರಾಟ ಶಿಕ್ಷರ್ಹ ಅಪರಾಧ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಲ್ಲಾ ಮಕ್ಕಳ ನಿರ್ದೇಶನಾಲಯದ ವತಿಯಿಂದ ನವೆಂಬರ್2024 ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ.

- Advertisement - 

ಇದರ ಅಂಗವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಪೂರ್ವ ಕೆ.ಆರ್.ಪುರಂ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

- Advertisement - 

ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ2015 ಸೆಕ್ಷನ್ 80 ಮತ್ತು 81 ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಬಹುದು.

ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆಮಾಡಬಹುದಾಗಿದೆ. 

- Advertisement - 

ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಪೂರ್ವ ಕೆ.ಆರ್.ಪುರಂ ದೂರವಾಣಿ ಸಂಖ್ಯೆ: 080-29904132ನ್ನು ಸಂಪರ್ಕಿಸುವಂತೆ ಬೆಂಗಳೂರು ಪೂರ್ವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";