ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೊಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಂಟಿ ಕೊಂಡಿರುವ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹ ಉತ್ತಮ ವಾಗಿದೆ, ಕೈಗಾರಿಕೆಗಳಿಂದ ಪಂಚಾಯಿತಿಗೆ ಆದಾಯ ಬರುತ್ತಿತ್ತು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ಹೇಳಲಾಗಿದೆ.
ನಿವೇಶನಗಳ ಇ-ಖಾತೆ ಮತ್ತು ಅರ್ಕಾವತಿ ನದಿ ಹೋರಾಟ ಸಮಿತಿ ದೂರುಗಳ ಹಿನ್ನಲೆ ಲೋಕಾಯುಕ್ತ ದಾಳಿ ನಡೆದಿದೆ ಎಂಬ ಮಾಹಿತಿ ಇದೆ, ಪಂಚಾಯಿತಿ ಕಾರ್ಯಾಲಯ ದಲ್ಲಿ ಬಿಡುಬಿಟ್ಟಿರುವ ಅಧಿಕಾರಿಗಳು ದಾಖಲೆ ಗಳ ಪರಿಶೀಲನೆ ನಡೆಸಿದ್ದಾರೆ.