ಎನ್‌ಎಸ್‌ಎಸ್‌ವಿಶೇಷ ಯುವಜನ ಶಿಬಿರಕ್ಕೆ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು
, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್‌ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್‌ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್‌ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ.

ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್‌ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ,

ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್‌ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";