ವಿದ್ಯಾರ್ಥಿಗಳ ಪ್ರೋತ್ಸಾಹಧನ ಹೆಚ್ಚಳ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ/ಐಐಎಂ/ಐಐಎಸ್‍ಸಿ/ ಎನ್‍ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ. 2.00 ಲಕ್ಷಗಳಿಗೆ  ಹೆಚ್ಚಿಸಿ ಸರ್ಕಾರ ಆದೇಶಿಸಿದೆ.

ಮುಂದುವರೆದಂತೆ, ಪಿ.ಯು.ಸಿ.ಯಲ್ಲಿ ಶೇಕಡ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಎನ್‍ಇಇಟಿ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಪಡೆದಿರುವ ಪ್ರತಿಭಾನ್ವಿತ ಪÀರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೊದಲನೆ ವರ್ಷದಲ್ಲಿ ರೂ.25.00 ಲಕ್ಷಗಳನ್ನು

ಕಾಲೇಜು ಶುಲ್ಕವಾಗಿ ಪಾವತಿಸಲು ಮತ್ತು ಸದರಿ ವಿದ್ಯಾರ್ಥಿಯು ಎಂಬಿಬಿಎಸ್ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನ: ರೂ.25.00 ಲಕ್ಷಗಳ ಪೆÇ್ರೀತ್ಸಾಹಧನವನ್ನು ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಆದೇಶಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";