ಉಪನ್ಯಾಸಕ ಎಂದು ನಕಲಿ ದಾಖಲೆ ಸಲ್ಲಿಸಿ 15 ಲಕ್ಷ ರೂ. ಸಾಲ ಪಡೆದ ಭೂಪ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖಾಸಗಿ ಬ್ಯಾಂಕ್‌ವೊಂದಕ್ಕೆ ಉಪನ್ಯಾಸಕ ಎಂದು ಸುಳ್ಳು ಹೇಳಿ ನಕಲಿ ದಾಖಲೆ ಸಲ್ಲಿಸಿ
15 ಲಕ್ಷ ರೂ. ಸಾಲ ಪಡೆದು ಬಳಿಕ ವಂಚಿಸಿರುವ ಆರೋಪದಡಿ ಕಬ್ಬನ್‌ಪಾರ್ಕ್‌ಪೊಲೀಸ್‌ಠಾಣೆಯಲ್ಲಿ ದೂರು ದಾಖಲಾಗಿದೆ.

ಕಸ್ತೂರ ಬಾ ರಸ್ತೆಯ ಯೆಸ್‌ಬ್ಯಾಂಕಿನ ವ್ಯವಸ್ಥಾಪಕ ಗೋಪಾಲ್‌ಜೀ ನವೀನ್‌ಎಂಬುವವರು ನೀಡಿದ ದೂರಿನ ಮೇರೆಗೆ ಶೇಷಾದ್ರಿಪುರ ನೆಹರು ನಗರ ನಿವಾಸಿ ಕೆ.ಭಾಸ್ಕರ್‌(36) ಎಂಬಾತನ ವಿರುದ್ಧ ವಂಚನೆ ಆರೋಪದಡಿ ಪೊಲೀಸರು ಎಫ್‌ಐಆರ್‌ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಏನಿದು ಪ್ರಕರಣ:
2022ರ ಜುಲೈನಲ್ಲಿ ಆರೋಪಿ ಭಾಸ್ಕರ್‌ಯೆಸ್‌ಬ್ಯಾಂಕಿನ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ತಾನು ಮೈಸೂರು ರಸ್ತೆಯ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಗದಿತ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಿ 15 ಲಕ್ಷ ರೂ. ಸಾಲ ಪಡೆದುಕೊಂಡಿದ್ದಾನೆ. ಬಳಿಕ ಸಾಲದ ಕಂತುಗಳನ್ನು ಪಾವತಿಸಿಲ್ಲ.

ಬ್ಯಾಂಕ್‌ಅಧಿಕಾರಿಗಳು ಆರೋಪಿ ಸಾಲ ಪಡೆಯುವಾಗ ಬ್ಯಾಂಕಿಗೆ ಸಲ್ಲಿಸಿದ್ದ ಕೆವೈಸಿ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಿದಾಗ, ನಕಲಿ ದಾಖಲೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಖಾಸಗಿ ಕಾಲೇಜಿನ ಉದ್ಯೋಗಿಯೊಬ್ಬರ ಪಾನ್‌ಕಾರ್ಡ್‌ನ ಫೋಟೋ ಮಾರ್ಫಿಂಗ್‌ಮಾಡಿ, ಪಾನ್‌ಕಾರ್ಡ್‌ನಕಲಿ ಮಾಡಿರುವುದು ಗೊತ್ತಾಗಿದೆ.

ಆರೋಪಿ ಈ ಹಿಂದೆ ಬ್ಯಾಂಕ್‌ವೊಂದರಿಂದ ಸಾಲ ಪಡೆದು 4.63 ಲಕ್ಷ ರೂ. ಬಾಕಿ ಇರುವುದು ಬೆಳಕಿಗೆ ಬಂದಿದೆ.
ತನ್ನ ಸಿಬಿಲ್‌ಸ್ಕೋರ್‌ಕಡಿಮೆಯಿದ್ದ ಹಿನ್ನೆಲೆ ಆರೋಪಿಯು ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ಸಾಲ ಪಡೆದು ಬಳಿಕ ಸಾಲ ಮರುಪಾವತಿಸದೆ ವಂಚಿಸಿರುವುದು ಗೊತ್ತಾಗಿದೆ.

ಈ ಸಂಬಂಧ ಯೆಸ್‌ಬ್ಯಾಂಕ್‌ವ್ಯವಸ್ಥಾಪಕ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಕಬ್ಬನ್‌ಪಾರ್ಕ್‌ಠಾಣೆ ಪೊಲೀಸರು ಆರೋಪಿ ಭಾಸ್ಕರ್‌ವಿರುದ್ಧ ಎಫ್‌ಐಆರ್‌ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";