ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಇದೇ ನ.9ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಕರ್ತರ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ “ವಿಶೇಷ ಉಪನ್ಯಾಸ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟನೆ ನೆರವೇರಿಸುವರು.
ವಕೀಲರು, ಪತ್ರಕರ್ತರು ಹಾಗೂ ಚಿತ್ರನಟ ಎಂ.ಬಿ.ರೇವಣಸಿದ್ದಯ್ಯ ಅವರು “ಮಾನನಷ್ಟ ಮೊಕದ್ದಮೆ ಹಾಗೂ ನ್ಯಾಯಾಂಗ ನಿಂದನೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಭಾಗವಹಿಸುವರು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕ ಪ್ರಕಟಣೆ ತಿಳಿಸಿದೆ.