ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಇದೇ ನ.09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ “ಕಾನೂನು ಅರಿವು ನೆರವು ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ರೋಣ್ ವಾಸುದೇವ್ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಪ್ರಾಸ್ತಾವಿಕವಾಗಿ ಮಾತನಾಡುವರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಆರ್.ವೆಂಕಟೇಶ್ ಭಾಗವಹಿಸುವರು.
ಪ್ರಧಾನ ಕಾನೂನು ಅಭಿರಕ್ಷಕ ಎಸ್. ವಿಜಯಕುಮಾರ್ “ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ–1987” ರ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.