ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ತಳಕು ಠಾಣಾ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದ ಲೋಕೇಶ್(೧೫) ೯ನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿಕೊಂಡು ಮಧ್ಯಾಹ್ನ ವೇಳೆಯಲ್ಲಿ ತಮ್ಮ ಗ್ರಾಮದ ಕೋಳಿಫಾರಂ ಬಳಿಯ ಬೋರ್‌ವೆಲ್‌ನಲ್ಲಿ ನೀರು ಕುಡಿಯುವ ಸಂದರ್ಭದಲ್ಲಿ ಕಬ್ಬಿಣದ ಪೈಪ್‌ಗೆ ಕೈತಗುಲಿದ ಹಿನ್ನೆಲೆಯಲ್ಲಿ ವಿದ್ಯುತ್ ಶಾಕ್‌ಹೊಡೆದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಸುದ್ದಿ ತಿಳಿದ ಕೂಡಲೇ ತಳಕು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಲೋಕೇಶ್ ಸಾವಿನ ಬಗ್ಗೆ ನ್ಯಾಯದೊರಕಿಸಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.