ಸಂಡೂರು ಬಿಜೆಪಿ ಗೆಲುವಿಗೆ ಮಹಾಜನ ತೀರ್ಮಾನ-ವಿಜಯೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ಸಂಡೂರು:
ಬಿಜೆಪಿ ಗೆಲುವಿಗೆ ಕಂಕಣತೊಟ್ಟಿದೆ ಸಂಡೂರಿನ ಪ್ರಬುದ್ಧ ಮಹಾಜನತೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂಬ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವರಾದ ಗಾಲಿ ಜನಾರ್ಧನರೆಡ್ಡಿ, ಬಿ.ಶ್ರೀರಾಮುಲು, ಆರಗ ಜ್ಞಾನೇಂದ್ರ, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";