ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಯುಕ್ತ, ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಆಯೋಜಿಸಲಾದ ಬೃಹತ್ ಬಹಿರಂಗ ಸಮಾವೇಶದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪಾಲ್ಗೊಂಡು ಮತಯಾಚನೆ ಮಾಡಿದರು.
ಚನ್ನಪಟ್ಟಣದ ಹೊಂಗನೂರು ಗ್ರಾಮದಲ್ಲಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಎನ್ ಡಿಎ ನಾಯಕರು ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಎನ್.ಡಿ.ಎ ಮೈತ್ರಿ ಕೂಟ ಸೇರಿದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬಂಡಪ್ಪ ಕಾಶಂಪೂರ,
ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮಾಜಿ ಸಚಿವ ಸಾ.ರಾ.ಮಹೇಶ್, ಪ್ರಮೋದ್ ಮಧ್ವರಾಜ್, ಕೋಲಾರದ ಮಾಜಿ ಸಂಸದ ಮುನಿಸ್ವಾಮಿ, ಶಾಸಕ ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕ ಲಿಂಗೇಶ್ ಹಾಗೂ ಅರಸು ಸಮಾಜದ ಮುಖಂಡರು, ಮೈತ್ರಿ ಪಕ್ಷಗಳ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.