ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಜಮೀರ್ ಅಹಮದ್ ಖಾನ್ ಅವರೇ ನಿಮ್ಮನ್ನೂ ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ನಿನ್ನ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ.
ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಷ್ಟೇ ಅಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಜಮೀರ್ ವಿರುದ್ಧ ಸಾರ್ವಜನಿಕರು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಯಾವುದು ? ಹೆಚ್.ಸಿ. ಮಹದೇವಪ್ಪ ಅವರ ಬಣ್ಣ ಯಾವುದು ? ಸತೀಶ್‌ಜಾರಕಿಹೊಳಿ ಅವರ ಬಣ್ಣ ಯಾವುದು ? ಪ್ರಿಯಾಂಕ್‌ಖರ್ಗೆ ಅವರ ಬಣ್ಣ ಯಾವುದು ? ಕೆ.ಹೆಚ್. ಮುನಿಯಪ್ಪ ಅವರ ಬಣ್ಣ ಯಾವುದು ? ಕೆ.ಜೆ. ಜಾರ್ಜ್‌ಅವರ ಬಣ್ಣ ಯಾವುದು ? ಡಿ.ಕೆ. ಸುರೇಶ್‌ಅವರ ಬಣ್ಣ ಯಾವುದು ? ರಹೀಮ್‌ಖಾನ್‌ಅವರ ಬಣ್ಣ ಯಾವುದು ? ಎಂದು ಜೆಡಿಎಸ್ ಜಮೀರ್ ಅವರನ್ನು ಪ್ರಶ್ನಿಸಿದೆ.
ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ? ಇಷ್ಟೊಂದು ಕೀಳು ಮನಸ್ಥಿತಿಯ ವ್ಯಕ್ತಿ ಜಮೀರ್ ಅಹಮದ್ ಖಾನ್ ಅವರನ್ನು ಈ ಕೂಡಲೇ ಭಾರತೀಯ ಕಾಂಗ್ರೆಸ್, ಕರ್ನಾಟಕ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಸಂಪುಟದಿಂದ ವಜಾಮಾಡಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಜನಾಂಗೀಯ ನಿಂದನೆ ಮಾಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು, ಜಮೀರ್ ಅಹ್ಮದ್ ಖಾನ್ “ಕಾಲಾ ಕುಮಾರಸ್ವಾಮಿ” (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.
ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್ ಅಹ್ಮದ್ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ ಅಪರಾಧ ಎಂದು ಜೆಡಿಎಸ್ ಆಕ್ರೋಶ ವ್ಯಕ್ತ ಪಡಿಸಿದೆ.
ಈ ಕೂಡಲೇ ಗೃಹ ಸಚಿವರಾದ ಡಾ.ಪರಮೇಶ್ವರ್, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್‌ಅಹ್ಮದ್‌ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸಿದೆ.
ಜಮೀರ್ ವರ್ಣನಿಂದನೆ, ಜನಾಂಗೀಯ ನಿಂದನೆ ಮಾಡುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ.
ರಾಷ್ಟ್ರೀಯ ಕಾಂಗ್ರೆಸ್‌ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಭಾರತೀಯ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್‌ರಾಜೀನಾಮೆ ಪಡೆಯಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ನಾಯಕರ ಮೇಲೆ ಜನಾಂಗೀಯ ದಾಳಿ, ನಿಂದನೆಗಳನ್ನು ಮಾಡುವುದೇ ಕಾಂಗ್ರೆಸ್ಸಿಗರ ಚಾಳಿ. ಇದು ರಾಜ್ಯ ಕಾಂಗ್ರೆಸ್ ಪಕ್ಷದ ನಿಜಮುಖ. ಮೊದಲಿಗೆ ಸಂಪಿತ್ರೋಡಾ ಈಗ ಜಮೀರ್ ಅಹಮದ್ ಖಾನ್ ಇಂತಹ ಹೇಳಿಕೆ ನೀಡಿದ್ದಾರೆ.
ದ್ವೇಷ ಹರಡುವುದು, ವಿಭಜಿಸುವುದು ಮತ್ತು ಅಗೌರವ ತೋರುವುದು ಕಾಂಗ್ರೆಸ್‌ಸಂಸ್ಕೃತಿ. ಇದಕ್ಕೆಲ್ಲ ಜೆಡಿಎಸ್ ಪಕ್ಷ ಹೆದರಿ ಕೂರುವುದಿಲ್ಲ ಎಂದು ಜನರು ಉತ್ತರ ನೀಡಿದ್ದಾರೆ.
ಜಮೀರ್ ಮೂಲಕ ರೈತರ ಭೂಮಿ ವಶಕ್ಕೆ ಪಡೆಯಲು ಮುಂದಾಗಿದ್ದ ಸಿದ್ದಣ್ಣ, ಈಗ ಅದೇ ಜಮೀರ್ ಮೂಲಕ ರೈತರ ಚರ್ಮದ ಬಣ್ಣವನ್ನು ನಿಂದಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರೇ, ರಾಜಕಾರಣ ಮಾಡಬೇಕು ಇಂತಹ ನೀಚ ರಾಜಕಾರಣ ಮಾಡಬಾರದು. ರೈತರ ಭೂಮಿ ಕಸಿದುಕೊಳ್ಳುವ ಪ್ರಯತ್ನದ ಜೊತೆಗೆ ಅವರ ಚರ್ಮದ ಬಣ್ಣವನ್ನು ನಿಂದಿಸುವ ಕಾರ್ಯಕ್ಕೆ ಚಾಲನೆ ಕೊಟ್ಟಿರಾ!!? ಎಂದು ಚಲುವೆಗೌಡ ಎನ್ನುವರು ಟ್ವೀಟ್ ಮಾಡಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಕುಮಾರಸ್ವಾಮಿ ಅವರು ಅಷ್ಟೇ ಅಲ್ಲ ದೇಶದ ಹಿಂದೂಗಳಲ್ಲಿ ಬಹುತೇಕರು ಕರಿಯರೇ. ನೀನು(ಜಮೀರ್) ಬೆಳ್ಳಗೆ ಇರುವ ಜನರ ದೇಶಕ್ಕೆ ಹೋಗಿ ಬಿಡು. ಹಿಂದೂಗಳ ಬಣ್ಣದ ಬಗ್ಗೆ ಟೀಕೆ ಮಾಡುವ ಇಂತಹ ಮತಾಂತರಿಗಳನೆಲ್ಲ ಮಟ್ಟಹಾಕುವ ಕಾಲ ದೂರವಿಲ್ಲ ಎಂದು ಮಾದವ್ ಎನ್ನುವವರು ಪ್ರತಿಕ್ರಿಯೆ ನೀಡಿದ್ದಾರೆ.
ವಿಶೇಷ ವಾಗಿ, ಚೆನ್ನಪಟ್ಟಣ ಮತದಾರ ಬಂಧುಗಳೇ ಮೊದಲು ಸ್ವಾಭಿಮಾನಕ್ಕೆ ಬೆಲೆ ಕೊಡಿ. ಮುಸ್ಲಿಂರು ಒಂದೊಂದು ಫೈಸೆ ಹಾಕಿ ಮಾನ್ಯ “ದೇವೇಗೌಡರ ಕುಟುಂಬವನ್ನು ಖರೀದಿ ಮಾಡ್ತಾನಂತೆ ಈ ಜಮೀರ, ದುರಂಕಾರದ ಪರಮಾವದಿ ಇದು. ಇವನಿಗೆ ಸರಿಯಾದ ಶಿಕ್ಷೆ ಆಗಬೇಕು ಅಂದ್ರೆ ನಿಖಿಲ್ ಕುಮಾರಸ್ವಾಮಿ ಯವರನ್ನು ಗೆಲ್ಲಿಸಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿ ಚನ್ನಪಟ್ಟಣದ ಜನರಲ್ಲಿ ಮನವಿ ಮಾಡಿದ್ದಾರೆ. ಇದೇ ರೀತಿ ಇನ್ನೂ ಹಲವರು ಟ್ವೀಟ್ ಮಾಡಿ ಜಮೀರ್ ವಿರುದ್ಧ ಕಿಡಿ ಕಾರಿದ್ದಾರೆ.