ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ರೇವಣ್ಣಗೆ ಸುಪ್ರೀಂ ಕೋರ್ಟ್‌ಜಾಮೀನು ನೀಡಲು ನಿರಾಕರಿಸಿದೆ.
ಕಳೆದ ಅಕ್ಟೋಬರ್21ರಂದು ಪ್ರಜ್ವಲ್‌ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಆರೋಪಿತರು ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಾಲಯ, ಆರೋಪಿಯ ವಿರುದ್ಧ ಇನ್ನೂ ಹಲವು ದೂರುಗಳಿವೆ. ಇಷ್ಟು ಮಾತ್ರವಲ್ಲದೇ ಆರೋಪಿ ಸಾಕಷ್ಟು ಪ್ರಭಾವಶಾಲಿಯಾಗಿರುವ ಹಿನ್ನಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ವೇಳೆ ನಾನು 6 ತಿಂಗಳ ನಂತರ ಅರ್ಜಿ ಸಲ್ಲಿಸಬಹುದೇ? ಎಂದು ವಕೀಲ ರೋಹಟಗಿ ವಿನಂತಿಸಿದರು ಇದಕ್ಕೆ ನಾವು ಏನನ್ನೂ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ತ್ರಿವೇದಿ ಪ್ರತಿಕ್ರಿಯಿಸಿದರು.