ಸಚಿವ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಕಾಲಾ ಕುಮಾರಸ್ವಾಮಿ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು
, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬೆಂಗಳೂರು ಜನತಾದಳ ‌ಘಟಕ ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

 ಸಚಿವ ಜಮೀರ್‌ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಕುಮಾರಸ್ವಾಮಿ ಅವರ ಮೇಲೆ ವರ್ಣನಿಂದನೆ ಮಾಡಿರುವ ಸಚಿವ ಜಮೀರ್ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೆಂಗಳೂರು ಮಹಾನಗರ ಘಟಕದ ಜೆಡಿಎಸ್ ಅಧ್ಯಕ್ಷ ಹೆಚ್‌.ಎಂ. ರಮೇಶ್‌ಗೌಡ ಅವರ ನೇತೃತ್ವದಲ್ಲಿ ಬೃಹತ್‌ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ವರ್ಣ ದ್ವೇಷಿ ಜಮೀರ್‌ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಲಾಯಿತು. 

ಈ ಸಂದರ್ಭದಲ್ಲಿ ಜೆಡಿಎಸ್‌ಪಕ್ಷದ ಬೆಂಗಳೂರು ಘಟಕಗಳ ಎಲ್ಲಾ ಅಧ್ಯಕ್ಷರು, ಮುಖಂಡರು, ಪದಾಧಿಕಾರಿಗಳು, ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.

- Advertisement -  - Advertisement -  - Advertisement - 
Share This Article
error: Content is protected !!
";