ಕಾಂಗ್ರೆಸ್ಸಿನಲ್ಲಿ ಮಿತಿ ಮೀರುತ್ತಿರುವ ಮತೀಯ ಓಲೈಕೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಸಿನ ಸರ್ವಜನಾಂಗದ ತೋಟದಲ್ಲಿ ಮತೀಯ ಓಲೈಕೆ ಮಿತಿ ಮೀರುತ್ತಿದೆ ಎಂದು ಬಿಜೆಪಿ ಟ್ವೀಟ್ ಆಕ್ರೋಶ ವ್ಯಕ್ತ ಪಡಿಸಿದೆ.
ಮುಸಲ್ಮಾನರ ಮತಬ್ಯಾಂಕ್ ಗುರಿಯಾಗಿಸಿಕೊಂಡು ಕಾಂಗ್ರೆಸ್ ಪಕ್ಷವು ಪದೇ ಪದೇ ಮತೀಯ ಓಲೈಕೆ ಮಾಡುತ್ತಿದೆ. ಆರಂಭದಲ್ಲಿ ಅಲ್ಪಸಂಖ್ಯಾತರಿಗೆ 1 ಸಾವಿರ ಕೋಟಿ ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಬಳಿಕ ತನ್ನ ಒಂದೊಂದೇ ಹಿಡನ್ ಅಜೆಂಡಾಗಳನ್ನು ಜಾರಿಗೊಳಿಸಲು ಆರಂಭಿಸಿದೆ ಎಂದು ಬಿಜೆಪಿ ಆರೋಪಿಸಿದೆ.
ವಕ್ಫ್ ಮಂಡಳಿಯ ಭೂಕಬಳಿಕೆಯ ಲ್ಯಾಂಡ್ ಜಿಹಾದಿಗೆ ಕಾಂಗ್ರೆಸ್ ಸರ್ಕಾರ ಬೆಂಗಾವಲಾಗಿ ನಿಂತಿತ್ತು, ಬಳಿಕ ಗುತ್ತಿಗೆಯಲ್ಲೂ ಧರ್ಮದ ಆಧಾರದಲ್ಲಿ ಮುಸಲ್ಮಾನರಿಗೆ ಮೀಸಲಾತಿ ನೀಡಲು ಷಡ್ಯಂತ್ರ ರೂಪಿಸಿತ್ತು ಎಂದು ಕಿಡಿಕಾರಿದೆ.
ಇದೀಗ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರಬೇಕೆಂಬ ನಿಯಮಕ್ಕೆ ಕೊಕ್ ನೀಡಲು ಚಿಂತನೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಮಾನ್ಯತೆಗಿರುವ ಷರತ್ತುಗಳನ್ನು ಸಡಿಲಗೊಳಿಸುತ್ತಿದೆ ಎಂದು ಅದು ದೂರಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯೋ ಘಜಿನಿ, ಘೋರಿಗಳ ಸರ್ಕಾರವಿದೆಯೋ ಎನ್ನುವ ಅನುಮಾನ ಕಾಡುತ್ತಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಮುಸ್ಲಿಂ ಲೀಗ್2.0 ಆಗಿರುವ ಕಾಂಗ್ರೆಸ್ ಪಕ್ಷಕ್ಕೆ ಓಲೈಕೆ ರಾಜಕಾಣವೇ ಮುಖ್ಯವಾಗಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.