ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
2004ರ ಬ್ಯಾಚ್ ನ ರಾಜ್ಯ ಕೇಡರ್ ಐಎಎಸ್ ಅಧಿಕಾರಿ ಶಿಖಾ ಅವರು ಮೈಸೂರು ಜಿಲ್ಲಾಧಿಕಾರಿ, ಸೆಸ್ಕಾಂ ಎಂಡಿ, ಬೆಸ್ಕಾಂ ಎಂಡಿ, ಪಿಯು ಬೋರ್ಡ್ ನಿರ್ದೇಶಕಿ, ಬಿಎಂಟಿಸಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ದಕ್ಷ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಈಗ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಶಿಖಾ ಅವರ ಪತಿ ಅಜಯ್ ನಾಗಭೂಷಣ್ ಕೂಡ ಐಎಎಸ್ ಅಧಿಕಾರಿಯಾಗಿದ್ದಾರೆ.