ಧರಣಿ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಕಾರ್ಮಿಕರಲ್ಲಿ ಮನವಿ ಮಾಡಿದ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಕೋಲಾರ:
ಕೋಲಾರ ಜಿಲ್ಲೆಯ ಕೆಜಿಎಫ್ ಪಟ್ಟಣದಲ್ಲಿ ಕಳೆದ 13 ದಿನಗಳಿಂದ
@BEMLltd ಕಾರ್ಮಿಕರು ಧರಣಿ ನಡೆಸುತ್ತಿದ್ದು, ಇಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಅವರ ಮನವಿ ಆಲಿಸಿದರು.

ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಾಗೂ ಕಂಪನಿಯ ಆಡಳಿತ ವರ್ಗದ ಜತೆ ಚರ್ಚೆ ನಡೆಸುವ ಭರವಸೆ ನೀಡಿದರು. ಕೂಡಲೇ ಧರಣಿ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಕಾರ್ಮಿಕ ಬಂಧುಗಳಲ್ಲಿ ಕುಮಾರಸ್ವಾಮಿ ಅವರು ಮನವಿ ಮಾಡಿದರು.


ಪಕ್ಷಗಳ ಹಲವಾರು ನಾಯಕರು
, ಕಾರ್ಮಿಕ ಸಂಘಟನೆಗಳ ಪ್ರಮುಖರು ಜತೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಕೋಲಾರ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಿದರು.

ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದರಾದ ಮುನಿಸ್ವಾಮಿ, ಶಾಸಕರಾದ ವೆಂಕಟ ಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು,

ಮಾಜಿ ಶಾಸಕರಾದ ಚೌಡರೆಡ್ಡಿ ತೂಪಲ್ಲಿ, ಸಂಪಂಗಿ, ನಾರಾಯಣ ಸ್ವಾಮಿ, ವೆಂಕಟ ಮುನಿಯಪ್ಪ ಸೇರಿ ಜಿಲ್ಲೆಯ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";