ಸಿದ್ದರಾಮಯ್ಯ ಸರ್ಕಾರದ ದಿವಾಳಿತನಕ್ಕೆ ಶಾಸಕರ ಕಣ್ಣೀರೇ ಸಾಕ್ಷಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಿವಾಳಿಯಾಗಿದೆಯಾ ಕರ್ನಾಟಕ ಕಾಂಗ್ರೆಸ್ ಸರ್ಕಾರ ದುಡ್ಡಿಲ್ಲದ ಖಾಲಿ ಕೈಆಡಳಿತ ಎಂದು ಜೆಡಿಎಸ್ ಟೀಕಿಸಿದೆ.

ರಾಜು ಕಾಗೆ ಬಳಿಕ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕರಾದ ಗವಿಯಪ್ಪ , ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡ್ತಿಲ್ಲ ಎಂದು ಕಣ್ಣೀರು ಹಾಕುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಜೆಡಿಎಸ್ ದೂರಿದೆ.

ಹೊಸದಾಗಿ ರಚನೆಯಾದ ವಿಜಯನಗರ ಜಿಲ್ಲೆಗೆ ಬರೀ‌10 ಕೋಟಿ ಅನುದಾನ‌ಕೊಡಲಾಗಿದೆ ಎಂದು ಶಾಸಕ ಗವಿಯಪ್ಪ ಅಸಮಾಧಾನ ತೋಡಿಕೊಂಡಿದ್ದಾರೆ. ಹಿಂದಿನ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ. ಆದರೆ ಈ ಬಾರಿ ಅನುದಾನ ಸಿಗದೆ, ಕ್ಷೇತ್ರದಲ್ಲಿ ಆಸ್ಪತ್ರೆಗಳು, ರಸ್ತೆಗಳ ಸಮಸ್ಯೆಗಳು ಸಾಕಷ್ಟಿದೆ.

ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಆಗುತ್ತಿಲ್ಲ ಎಂದು ತಮ್ಮ  ಸರ್ಕಾರದ ವಿರುದ್ಧವೇ ಕಿಡಿಕಾರಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅದಕ್ಷ ಆಡಳಿತಕ್ಕೆ ಉದಾಹರಣೆ ಎಂದು ಜೆಡಿಎಸ್ ದೂರಿದೆ.

ಗ್ಯಾರಂಟಿ ಯೋಜನೆಗಳಿಗೆ ಹಣಹೊಂದಿಸಲು ಹೆಣಗಾಡುತ್ತಿರುವ ಸಿಎಂಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡುತ್ತಿಲ್ಲ.‌ಸ್ವತಃ ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಕಣ್ಣೀರಿಡುತ್ತಿದ್ದರೂ ಮುಖ್ಯಮಂತ್ರಿಗಳು ಕಿವಿಗೊಡುತ್ತಿಲ್ಲ. ಯಾಕಂದರೆ ಸರ್ಕಾರದ ಬೊಕ್ಕಸ ಖಾಲಿ ಮಾಡಿರುವುದೇ ಸಿದ್ದರಾಮಯ್ಯ ಅವರ ಸಾಧನೆ ಎಂದು ಜೆಡಿಎಸ್ ಟಾಂಗ್ ನೀಡಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";