ಪತ್ರಕರ್ತ, ಚಿಂತಕ ವಿ.ಟಿ.ರಾಜಶೇಖರ್ ಇನ್ನಿಲ್ಲ, ಸಿಎಂ ಕಂಬನಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಖ್ಯಾತ ಪತ್ರಕರ್ತ
, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ (93) ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಪತ್ರಿಕಾ ವೃತ್ತಿಯನ್ನು ಒಬ್ಬ ಹೋರಾಟಗಾರನಾಗಿಯೇ ಮುನ್ನಡೆಸಿದ್ದ ರಾಜಶೇಖರ್
, ಜಾತಿ ವ್ಯವಸ್ಥೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಸದಾ ಸಿಡಿಯುತ್ತಿದ್ದವರು.

ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ನಂತರ ಅಲ್ಲಿಂದ ಹೊರಬಂದು 1981ರಲ್ಲಿ ದಲಿತ್ ವಾಯ್ಸ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಆ ದಿನಗಳಿಂದಲೇ ಪರಿಚಿತರಾಗಿದ್ದ ರಾಜಶೇಖರ್ ಅವರು ಒಬ್ಬ ಹಿರಿಯ ಹಿತೈಷಿಯಾಗಿ ನನಗೆ ಮಾರ್ಗದರ್ಶನ ನೀಡುತ್ತಿದ್ದವರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ರಾಜಶೇಖರ್ ಅವರ ಸಾವು ಸಮಾಜಕ್ಕೆ ದೊಡ್ಡ ನಷ್ಟ ಮಾತ್ರವಲ್ಲ, ಅವರಂತಹ ಜನಪರ ಚಿಂತಕರ ನಿಧನದಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕೂಡಾ ಕಷ್ಟ. ತಂದೆಯನ್ನು ಕಳೆದುಕೊಂಡ ಅಮ್ನೆಷ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ, ಮಗ ಸಲೀಲ್ ಶೆಟ್ಟಿ, ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";