ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಬಡವರ BPL ಪಡಿತರ ಕಾರ್ಡ್ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯವಾಗಿದ್ದು, ಬಡವರ ಅನ್ನಕ್ಕೆ ಕನ್ನಹಾಕುತ್ತಿದ್ದು ಕೂಡಲೇ ಈ ಆದೇಶ ವಾಪಸ್ಸು ಪಡೆಯುವಂತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರವೇ ಬಡವರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು ಎಂದು ಕಿಡಿಕಾರಿದರು.
ಬಿಪಿಎಲ್‌ಕಾರ್ಡ್‌ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. ಗಾರ್ಮೆಂಟ್‌ಕೆಲಸಕ್ಕೆ ಹೋಗುವ ಕುಟುಂಬ, ಅಂಗವಿಕಲರು, ವೃದ್ಧರು ಹೆಚ್ಚಾಗಿ ತೊಂದರೆಗೆ ಒಳಗಾಗುತ್ತಿದ್ದಾರೆ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್‌ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್‌ಸರ್ಕಾರವು ಮುಂದಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಯಾವುದೇ ಪರಿಶೀಲನೆಯಾಗಲಿ ತಜ್ಞರ ಮಾರ್ಗದರ್ಶನವಾಗಲಿ ಪಡೆಯದೇ ಅವೈಜ್ಞಾನಿಕವಾದ ಆದೇಶ ಜಾರಿ ಮಾಡಲು ಹೊರಟಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ಸಾಮಾನ್ಯ ವರ್ಗದ ಜನರು ಆರ್ಥಿಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹರೀಶ್ ಗೌಡ ಹೇಳಿದ್ದಾರೆ.