ನಾಮನಿರ್ದೇಶನಕ್ಕೆ ಪ್ರಸ್ತಾವನೆಗಳ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಬೈಲಾದ ಉಪ ನಿಯಮ 3ರನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ವ ಸದಸ್ಯರ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಸಂಬಂಧ ಪ್ರಸ್ತಾವನೆಗಳ ಆಹ್ವಾನಿಸಲಾಗಿದೆ. .28 ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನವಾಗಿದೆ.

ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಗೆ ಸರ್ವ ಸದಸ್ಯರ ಸಭೆಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಸಲುವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕರು (ಇಬ್ಬರು),

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ಒಬ್ಬರು), ಮಹಿಳಾ ಪ್ರತಿನಿಧಿಗಳು (ಇಬ್ಬರು) ಹಾಗೂ ಅಲ್ಪಸಂಖ್ಯಾತರ ಪ್ರತಿನಿಧಿಗಳು (ಒಬ್ಬರು) ಸೇವೆ ಸಲ್ಲಿಸುರುವವರು ಅವರ ವಿವರಗಳನ್ನೊಳಗೊಂಡ ಸೂಕ್ತ ಪ್ರಸ್ತಾವನೆಯನ್ನು ಇದೇ .28 ಸಂಜೆ 5.30ರೊಳಗೆ ಕಾರ್ಮಿಕ ಅಧಿಕಾರಿ, ಸದಸ್ಯ ಕಾರ್ಯದರ್ಶಿಗಳು,

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿ, ಎಸ್ಬಿಐ ಬ್ಯಾಂಕ್ ಮೇಲ್ಭಾಗ, ಜೆ.ಸಿ.ಆರ್.ಬಡಾವಣೆ ಮುಖ್ಯರಸ್ತೆ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";