ಚಂದ್ರವಳ್ಳಿ ನ್ಯೂಸ್, ತುಮಕೂರು:
ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವದ ಬಗ್ಗೆ ಜನ ಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ ೧೫ರಂದು ಜಿಲ್ಲೆಯಲ್ಲಿ ೯೦ ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ತುಮಕೂರು ಜಿಲ್ಲೆಯು ಅತೀ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ವಿಭಾಗದಲ್ಲಿ ಪ್ರಥಮ
ಹಾಗೂ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ದ್ವಿತೀಯ ಸೇರಿ ಒಟ್ಟು ೨ ಪ್ರಶಸ್ತಿಗಳಿಗೆ ಭಾಜನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಶಸ್ತಿಯನ್ನು ನವೆಂಬರ್ ೨೬ರ ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರಿನ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.