ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಮಠಮಾನ್ಯಗಳ ಶ್ರೇಷ್ಠ ಪರಂಪರೆ ಕನ್ನಡನಾಡಿನ ಸಂಸ್ಕೃತಿಯ ಪ್ರತೀಕ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‘ನ ರಾಣಿ ಅಬ್ಬಕ್ಕ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪರಮಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರ ಮಹಾಸ್ವಾಮಿಜಿಗಳ ನೇತೃತ್ವದಲ್ಲಿ ನಡೆದ ಶ್ರೀ ಪುಷ್ಪಗಿರಿ ಸಾಂಸ್ಕೃತಿಕ ಉತ್ಸವ -ಬೆಂಗಳೂರು 2024 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಪುಷ್ಪಗಿರಿ ಮಠ ನಡೆಸುತ್ತಿರುವ ಸಾಂಸ್ಕೃತಿಕ ಉತ್ಸವ ನೆಲದ ಸಂಸ್ಕೃತಿ, ಪರಂಪರೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಪಸರಿಸುವ ಉತ್ತಮ ಸಂದೇಶವನ್ನು ಸಾರುತ್ತಿರುವ ಮಹಾನ್ ಕಾರ್ಯ ಇದಾಗಿದೆ ಎಂದು ಅವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಕೆ.ಗೋಪಾಲಯ್ಯ, ಶಾಸಕರಾದ ಎಚ್ ಕೆ ಸುರೇಶ್, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಎಂ ಡಿ ಲಕ್ಷ್ಮೀನಾರಾಯಣ, ಪಕ್ಷದ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್, ಹರೀಶ್, ಹಾಸನ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ,
ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಮಾಜಿ ಬಿಬಿಎಂಪಿ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿಗಳಾದ ಜ್ಯೋತಿ ಪ್ರಕಾಶ್ ಮಿರ್ಜಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರ್, ವಕೀಲ ಸಂದೀಪ್ ಪಾಟೀಲ್ ಸೇರಿದಂತೆ ಹಲವು ಗಣ್ಯರು, ಮುಖಂಡರು ಶ್ರೀಮಠದ ಭಕ್ತಾದಿಗಳು ಭಾಗವಹಿಸಿದ್ದರು.