ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಾದೇಶಿಕ ಅಸಮಾನತೆಯಿಂದಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಮೂಲಸೌಕರ್ಯ ಹಾಗೂ ಅಭಿವೃದ್ಧಿಯಲ್ಲಿ ಹಿಂದುಳಿದಿವೆ ಎನ್ನುವುದನ್ನು ಖಂಡಿತಾ ಒಪ್ಪಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಅಸಮಾನತೆಯ ನಿವಾರಣೆಗಾಗಿ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ಸಿಂಗ್‌ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು 371J ಅನ್ನು ಕಲ್ಪಿಸಿಕೊಟ್ಟರು ಎಂದು ಸಿಎಂ ಹೇಳಿದ್ದಾರೆ.
ಈ ವರ್ಷ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ರೂ.5,000 ಕೋಟಿ ಅನುದಾನವನ್ನು ನೀಡಿದ್ದೇನೆ. ಇದರಿಂದ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಕ್ಕಲಿದೆ.
ಮುಂದಿನ ದಿನಗಳಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಮೂಲಸೌಕರ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಸುಧಾರಣೆ ಆಗಲಿದೆ ಎಂಬ ಭರವಸೆ ನನಗಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.