ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಇದೇ ನ.26ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಸಮುದ್ರದಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ.
ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್ಸಾಬ್ ಕೋರಿದ್ದಾರೆ.