ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ದುರುಪಯೋಗಪಡಿಸಿಕೊಂಡು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಹೇಯ ಕೃತ್ಯವನ್ನು ದೇಶದ ಜನತೆ, ರಾಜ್ಯದ ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರ ಮತ್ತು ಕಾಂಗ್ರೆಸ್ ವಿರುದ್ಧ ಟೀಕಿಸಿದ್ದಾರೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನಕ್ಕೆ ಸಂಪೂರ್ಣವಾದ ಗೌರವವನ್ನು ತಂದುಕೊಡುವ ಪ್ರಾಮಾಣಿಕ ಕೆಲಸವನ್ನು ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ರಾಜ್ಯಾಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.