ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಪ್ರಯುಕ್ತ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ‘ಸಂವಿಧಾನ ಸನ್ಮಾನ ಅಭಿಯಾನʼ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಬಿ. ಜಿ.ಪಾಟೀಲ್, ಶಶಿಲ್ ಜಿ. ನಮೋಶಿ,
ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ ಮತ್ತಿಮಡು, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ,
ಪ್ರಕೋಷ್ಠಗಳ ರಾಜ್ಯ ಸಂಚಾಲಕ ದತ್ತಾತ್ರಿ ಎಸ್, ರಾಜ್ಯ ಕಾರ್ಯದರ್ಶಿ ಲಲಿತಾ ಆನಾಪುರ, ಎಸ್. ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.