ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಕ್ಫ್ ವಿರುದ್ಧ ಪ್ರತಿಭಟನೆ ಮಾಡಿದ ಕಿಸಾನ್ ಸಂಘ ಮತ್ತು ಸಂಘ ಪರಿವಾರದ ಸದಸ್ಯರಿಗೆ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕಾತ್ರಿಕೇನಳ್ಳಿ ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಕಿಸಾನ್ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ನವೆಂಬರ್ 25 ರಂದು ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರಗೆ ರೈತರ ಜಮೀನುಗಳನ್ನು ಹಾಗೂ
ಮಠ ಮಂದಿರಗಳ ಆಸ್ತಿ- ಪಾಸ್ತಿ ಯನ್ನು ವಶಪಡಿಸಿಕೊಳ್ಳುತ್ತಿರುವ ವಕ್ಫ್ ಮಂಡಳಿ ವಿರುದ್ಧವಾಗಿ ನಡೆಸಿದ ಪ್ರತಿಭಟನಾ ಮೆರವಣಿಗೆ ಹೋರಾಟದಲ್ಲಿ ಭಾಗವಹಿಸಿದ ಜಿಲ್ಲೆಯ ಎಲ್ಲಾ ಸಂಘ ಪರಿವಾರದ ಕಾರ್ಯಕರ್ತ ಬಂಧುಗಳು ರಾಜಕಾರಣಿಗಳು ಹಾಗೂ
ರೈತ ಮುಖಂಡರಿಗೆ ಭಾರತೀಯ ಕಿಸಾನ್ ಸಂಘದಿಂದ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕಾತ್ರಿಕೇನಳ್ಳಿ ಮಂಜುನಾಥ್ ತಿಳಿಸಿದ್ದಾರೆ.