ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನಮನ್ನಣೆ ಗಳಿಸಿಕೊಳ್ಳುವಲ್ಲಿ ವಿಫಲವಾದಾಗಲೆಲ್ಲ ಹತಾಶೆಗೊಂಡು “ಕುಣಿಯಲಾರದವರು ನೆಲ ಡೊಂಕು ಅಂದರಂತೆ” ಎಂಬ ಹಾಗೆ ಕಾಂಗ್ರೆಸ್ಸಿಗರು EVM ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಕಾಂಗ್ರೆಸ್ ನವರು ಗೆದ್ದಾಗ ಇವಿಎಂ ಬಗ್ಗೆ ಸೊಲ್ಲೆತ್ತುವುದಿಲ್ಲ, ಸೋತು ನೆಲಕ್ಕುರುಳಿದಾಗ ಮಾತ್ರ EVM ದೋಷ ಎಂದು ಆರೋಪಿಸುವುದು ಕಾಂಗ್ರೆಸ್ ಪಕ್ಷದ ಚಾಳಿಯಾಗಿದೆ ಎಂದು ಅವರು ದೂರಿದ್ದಾರೆ.
ಸರ್ವೋಚ್ಚ ನ್ಯಾಯಾಲಯ ಮತ್ತೆ ಮತ್ತೆ ಮುಖಕ್ಕೆ ಮಂಗಳಾರತಿ ಎತ್ತಿದರೂ, ಇನ್ನೂ ಕೂಡ ಪ್ರಜಾಪ್ರಭುತ್ವದ ಸುಧಾರಣಾ ವ್ಯವಸ್ಥೆಯನ್ನು ಅಣಕಿಸುತ್ತಿರುವ ಕಾಂಗ್ರೆಸ್ಸಿಗರ ನಡವಳಿಕೆ ಈ ಹಿಂದೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಡೆಸಿದ ಪಾಳೇಗಾರಿಕೆ ರಾಜಕಾರಣವನ್ನು ಬಯಸುವ ಮನಸ್ಥಿತಿ ಬಿಂಬಿಸುತ್ತದೆ ಎಂದು ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.