ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಕ್ಕಲಿಗ ಸಮುದಾಯದ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿರುವುದು ಎಸ್‌ಐಟಿಗೆ ದೊರಕಿರುವ ಎಫ್‌ಎಸ್‌ಎಲ್‌ವರದಿಯಲ್ಲಿ ಸಾಬೀತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಕಿಡಿ ಕಾರಿದೆ.
ಕೇವಲ ಸಮುದಾಯದ ಕುರಿತು ಕೀಳಾಗಿ ಮಾತನಾಡಿದ್ದಷ್ಟೇ ಅಲ್ಲ, ಆ ಸಮುದಾಯದ ಹೆಣ್ಣುಮಕ್ಕಳ ಬಗ್ಗೆಯೂ ತನ್ನ ಎಲುಬಿಲ್ಲದ ನಾಲಿಗೆ ಹರಿಬಿಟ್ಟಿದ್ದಾರೆ.
ಬಾಯಿಬಿಟ್ಟರೆ ಹಿಂದೂ ನಾವೆಲ್ಲಾ ಒಂದು ಎನ್ನುವ ಬಿಜೆಪಿ ನಾಯಕರು ಅನ್ಯ ಜಾತಿವರನ್ನು ಎಷ್ಟು ಕೀಳಾಗಿ ಕಾಣುತ್ತಾರೆ ಎನ್ನುವುದಕ್ಕೆ ಮುನಿರತ್ನ ಪ್ರಕರಣವೇ ಪ್ರತ್ಯಕ್ಷ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ನರೇಂದ್ರ ಮೋದಿಯವರ ‘ಭೇಟಿ ಬಚಾವೋ, ಭೇಟಿ ಪಡಾವೋ‘ ಕೇವಲ ಬೊಗಳೆ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದು, ನಿಜವಾಗಿಯೂ ನಾರಿ ಇಂದು ಮುನಿರತ್ನನಂತಹ ಕಾಮುಕರ ಕೈಯಲ್ಲಿ ಸಿಲುಕಿ ನಲುಗಿ ಹೋಗುತ್ತಿದ್ದಾಳೆ. ಇಷ್ಟೆಲ್ಲಾ ಆದರೂ ಬಿಜೆಪಿಯ ಯಾವೊಬ್ಬ ನಾಯಕರು ಮುನಿರತ್ನ ಕೃತ್ಯದ ಕುರಿತು ತುಟಿಬಿಚ್ಚದಿರುವ ರಹಸ್ಯವೇನು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.