ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರಂಟಿಗೆ ಹಣ ಹೊಂದಿಸಲಾಗದೆ ಹೆಣಗಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ದೂರಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಸಮವಸ್ತ್ರ ನೀಡಲು ದುಡ್ಡಿಲ್ಲದೇ ದಿವಾಳಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಮಕ್ಕಳ ಮೇಲೆ ಕ್ರಮಕ್ಕೆ ಆದೇಶಿಸುವ ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿ ಏನು ಮಾಡುತ್ತಿದ್ದೀರಿ..? ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ.
ಥೂ.. ವಚನಭ್ರಷ್ಟ ಹೊಣೆಗೇಡಿ ಕಾಂಗ್ರೆಸ್ಸರ್ಕಾರಕ್ಕೆ ನಾಚಿಕೆಯಾಗಬೇಕು! ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.