ಬಳ್ಳಾರಿಯಲ್ಲಿ ಮುಂದುವರೆದ ಬಾಣಂತಿಯರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಮುಂದುವರಿದಿದ್ದು
, ಸರಣಿ ರೀತಿಯ ಸಾವಿನ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಾಪಕವಾಗಿದೆ. ಇತ್ತೀಚೆಗಷ್ಟೇ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರು ಸಾವನ್ನಪ್ಪಿದ್ದರು.

ಸೋಮವಾರ (ನ.25) ರಾತ್ರಿ ಹೊಸಪೇಟೆ ಮೂಲದ ಮುಸ್ಕಾನ್(22) ಮೃತಪಟ್ಟಿದ್ದರು. ಈ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ ಮಹಾಲಕ್ಷ್ಮಿ(
20) ಸಾವಿಗೀಡಾದ ಮಹಿಳೆ. ಭಾನುವಾರ ಸಾಮಾನ್ಯ ಹೆರಿಗೆಯಾಗಿದ್ದ ಮಹಾಲಕ್ಷ್ಮೀಗೆ ಗಂಡು ಮಗುವಿಗೆ ಜನಿಸಿತ್ತು.

ಹೆರಿಗೆ ಬಳಿಕ ಮಹಾಲಕ್ಷ್ಮಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಹಾಲಕ್ಷ್ಮಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಮುನ್ನ ಮಹಾಲಕ್ಷ್ಮಿ ಚೆನ್ನಾಗಿದ್ದಳು ಎಂದು ದೂರಿದ್ದಾರೆ.

ಬಿಮ್ಸ್ ವೈದ್ಯರು ಸಾವಿನ ಕುರಿತು ಸ್ಪಷ್ಟನೆ ನೀಡಿದ್ದು ಮೃತ ಮಹಾಲಕ್ಷ್ಮಿಗೆ ಅನಿಮಿಯಾ ಇತ್ತು, ಮೊದಲು ಅವರು ಕೂಡ್ಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಅಲ್ಲಿ ಆರೋಗ್ಯದಲ್ಲಿ ಏರುಪೇರಾಗಿತ್ತು.

ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ನಾವು ಮೊದಲೇ ತಿಳಿಸಿದ್ವಿ, ಅಲ್ಲದೇ ನಮ್ಮ ಪ್ರಯತ್ನ ನಾವು ಮಾಡಿದ್ದೇವೆ ಎಂದು ಬಿಮ್ಸ್ ನಿರ್ದೇಶಕ ನಿರ್ದೇಶಕ ಗಂಗಾಧರ ಗೌಡ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -  - Advertisement -  - Advertisement - 
Share This Article
error: Content is protected !!
";