ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭೋವಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. 34 ಕೋಟಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಹಣ ವರ್ಗಾವಣೆಯಲ್ಲಿ ವಕೀಲೆ ಜೀವಾ ಅವರ ಪಾತ್ರ ಇರುವ ಬಗ್ಗೆ ಅನುಮಾನ ಇದ್ದು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಜೀವಾ ಅವರ ಅನ್ನಿಕಾ ಎಂಟರ್ ಪ್ರೈಸಸ್‌ಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ. ಅನ್ನಿಕಾ ಎಂಟರ್ ಪ್ರೈಸಸ್‌ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ.
ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.
ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕಿ ಲೀಲಾವತಿ ಅವರ ಸೋದರಿ ಮಂಗಳ ರಾಮು ಅವರಿಗೆ ಹಂತ ಹಂತವಾಗಿ ಕಳ್ಳ ಹಾದಿಯಲ್ಲಿ 1.48 ಕೋಟಿ ರೂ. ಹಣ ವರ್ಗವಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಆಗಿದ್ದು ತನಿಖೆಯಿಂದ ಬಯಲಾಗಿದೆ.