ಖಾಲಿಯಿರುವ ಹುದ್ದೆಗಳಿಗೆ ನವೆಂಬರ್ 29 ರಂದು ನೇರ ಸಂದರ್ಶನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 11 ರಿಂದ ಅಪರಾಹ್ನ 4.00 ಗಂಟೆಯವರೆಗೆ “ನೇರಸಂದರ್ಶನ”ವನ್ನು ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ  ಆಲ್ಟ್ರುಯಿಸ್ಟ್ ಟೆಕ್ನಾಲಜೀಸ್ ಸಂಸ್ಥೆಯವರು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಪಿ.ಯು.ಸಿ, ಪದವಿ, ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶದಲ್ಲಿ ಭಾಗವಹಿಸಬಹುದಾಗಿದೆ.

ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7795739724/ 7899338057 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";