ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ನಾಯಕಿ ಪ್ರಿಯಾಂಕಾ ಗಾಂಧಿ ಅವರು ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ನಾಂದೇಡ್‌ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌(ಕಾಂಗ್ರೆಸ್‌) ಕೂಡ ದೇವರ ಹೆಸರಿನಲ್ಲಿ ಮರಾಠಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್‌ಚವಾಣ್‌ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. ನಂತರ ಕಾಂಗ್ರೆಸ್‌‍ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ಪ್ರಯಾಣ ಮಾಡಿದ್ದಾರೆ.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಿಯಾಂಕಾ ಅವರು ಕೇರಳದ ಬ್ರೋಕೆಡ್ ಸೀರೆ ಧರಿಸಿ ಗಮನ ಸೆಳೆದಿದ್ದಾರೆ. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ, ಪ್ರಿಯಾಂಕಾ ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿ ಪ್ರಮಾಣ ವಚನ ಸ್ಪೀಕರಿಸಿದ್ದಾರೆ.

ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿದ್ದ ಪ್ರಿಯಾಂಕಾ ಗಾಂಧಿ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿ ಸಂಸತ್ ಪ್ರವೇಶ ಮಾಡಿದ್ದಾರೆ. ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ಸಾಥ್ ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಿ ಸಹೋದರ-ಸಹೋದರಿ ಸಂಸತ್ ನಲ್ಲಿ ಹವಾ ಸೃಷ್ಠಿಸಲಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";