ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೋದಿ ಸರ್ಕಾರ ಬಡವರ ಪರವಾದ ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ. ದೇಶದ ಬಡವರು, ರೈತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಆದರೆ, ಶ್ರೀಮಂತರು, ಉದ್ಯಮಿಗಳು ಕಳೆದ 5 ವರ್ಷಗಳಲ್ಲಿ ಕಮರ್ಷಿಯಲ್ ಬ್ಯಾಂಕುಗಳಿಂದ ಪಡೆದ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದೆ. ಇದು ಮೋದಿಯವರ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್”! ಎಂದು ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮಾಡಿದೆ.