ಮುಲಾಯಂ ಸಿಂಗ್ ಯಾದವ್ ರವರ ಜಯಂತೋತ್ಸವ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಮಾಜವಾದಿ ಪಕ್ಷದ ಸಂಸ್ಥಾಪಕ
, ಪದ್ಮಭೂಷಣ ದಿ. ಮಲಯಂ ಸಿಂಗ್ ಯಾದವ್ ರವರ 85ನೇ ಜಯಂತೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಗಾಂಧಿನಗರದ ಕನಿಷ್ಕಾ ಗ್ರಾಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

       ಈ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರಾಯ್, ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ಮಂಜಪ್ಪ, ವಿಧಾನ ಪರಿಷತ್ ಸದಸ್ಯ ಡಿ. ಟಿ. ಶ್ರೀನಿವಾಸ್, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಎ. ವಿ. ನಾರಾಯಣ್,

ಗೌರಿ ಬಿದನೂರು ತಾಲೂಕು ಅಧ್ಯಕ್ಷ ನಾರಾಯಣ ಸ್ವಾಮಿ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್, ಬಳ್ಳಾರಿ ಜಿಲ್ಲಾಧ್ಯಕ್ಷ ವೇಣುಗೋಪಾಲ್, ತುಮಕೂರು ಜಿಲ್ಲಾಧ್ಯಕ್ಷ ನಾಗಣ್ಣ, ಗುಲ್ಬರ್ಗ ಜಿಲ್ಲಾಧ್ಯಕ್ಷ ಖಾಸಿಂ ಸೇರಿದಂತೆ ಸಮಾಜವಾದಿ ಪಕ್ಷದ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";