ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಶನಿವಾರ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ, ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಚನ್ನಪಟ್ಟಣದ ಕೂಡ್ಲೂರು ಬಳಿಯ ಶಿಶಿರ ರೆಸಾರ್ಟ್ ನಲ್ಲಿ ನಡೆದ ಈ ಸಮಾರಂಭದಲ್ಲಿ ಮಾಜಿ ಶಾಸಕ ಸಾರಾ ಮಹೇಶ್, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಜಯಮುತ್ತು ಅವರು ರಾಮನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಆನಂದಸ್ವಾಮಿ
ಅವರು ಸೇರಿದಂತೆ NDA ಮೈತ್ರಿ ಪಕ್ಷಗಳಾದ ಜೆಡಿಎಸ್‌ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.