ಕಾಂಗ್ರೆಸ್​ ಕಚೇರಿಯಲ್ಲಿ ಹೊಡೆದಾಡಿದ ಮುಖಂಡರು

News Desk

ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಕಾಂಗ್ರೆಸ್​ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಮಲ್ಲಿಕಟ್ಟೆ ಬಳಿ ಇರುವ ಕಚೇರಿಯಲ್ಲಿ ನಡೆದಿದೆ.

ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದೆ.

ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್​ಕುಮಾರ್ ಹೊಡೆದಿದ್ದಾರೆ. ಇದೇ ವೇಳೆ, ತಿರುಗಿಸಿ ಹರೀಶ್​ಗೆ ಹೊಡೆಯಲು ಪ್ರಕಾಶ್ ಶೆಟ್ಟಿ ಮುಂದಾಗಿದ್ದಾರೆ.

ಘಟನೆ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಗೆ ಪೊಲೀಸರು ಆಗಮಿಸಿದ್ದಾರೆ. ಸಂಟ್ರಲ್ ಎಸಿಪಿ ಮತ್ತು ಕದ್ರಿ ಪೊಲೀಸರು ಆಗಮಿಸಿದ್ದಾರೆ. ಸದ್ಯ ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕರ್ತರು ಜಮಾಯಿಸಿದ್ದರು.

ಉದ್ವಿಗ್ನತೆ- ಹೊಡೆದಾಡಿಕೊಂಡಿದ್ದ ಕಾಂಗ್ರೆಸ್ ಮುಖಂಡರ ಮಧ್ಯೆ ಸಂಧಾನ ನಡೆಸಿದ್ದರೂ ಕಚೇರಿ ಬಳಿ ಇಬ್ಬರು ಮುಖಂಡರ ಬೆಂಬಲಿಗ ಕಾರ್ಯಕರ್ತರು ಜಮಾಯಿಸಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

- Advertisement -  - Advertisement -  - Advertisement - 
Share This Article
error: Content is protected !!
";