ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕೇಡರ್ ಗೆ ಆಯ್ಕೆಯಾಗಿದ್ದ ಬಿಹಾರ ಮೂಲದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಹಾಸನಕ್ಕೆ ತೆರಳುವಾಗ ಮಾರ್ಗಮಧ್ಯೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದುರಾದೃಷ್ಟಕರ ಎಂದು ಬಿಜೆಪಿ ಸಂತಾಪ ಸೂಚಿಸಿದೆ.
ಐಪಿಎಸ್ ಹುದ್ದೆಗೆ ಆಯ್ಕೆಯಾಗುವುದು ಸುಲಭದ ಮಾತಲ್ಲ, ಹರ್ಷಬರ್ಧನ್ ಅವರ ಯಶಸ್ಸಿನ ಹಿಂದಿನ ಅವರ ಪರಿಶ್ರಮ, ಕುಟುಂಬದ ತ್ಯಾಗ ಹಾಗೂ ಪ್ರೋತ್ಸಾಹವನ್ನು ಮರೆಯಲಾಗದು.
ಭವಿಷ್ಯತ್ತಿನಲ್ಲಿ ನಾಡಿನ ಸೇವೆಗೆ ಮಹತ್ವದ ಕೊಡುಗೆ ನೀಡಬಹುದಾದ ಒಬ್ಬ ಅಧಿಕಾರಿಯು ನಿರ್ದಯವಾಗಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.
ಮೃತ ಹರ್ಷಬರ್ಧನ್ ಅವರ ಕುಟುಂಬದವರಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಬಿಜೆಪಿ ಶ್ರದ್ಧಾಂಜಲಿ ಅರ್ಪಿಸಿದೆ.