ಡಾ.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪುಣ್ಯಸ್ಮರಣೆ (ಮಹಾ ಪರಿನಿರ್ವಾಣ) ದಿನ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಇಲ್ಲಿನ ನಗರಸಭೆ ಹತ್ತಿರವಿರುವ ಡಾ.ಬಿ.ಆರ್.ಅಂಬೇಡ್ಕರ್‍ರವರ ಪ್ರತಿಮೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ  ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯದ  ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು, ಡಾ.ಬಿ.ಆರ್.ಅಂಬೇಡ್ಕರ್‍ರವರ ಅನುಯಾಯಿಗಳು ಇದ್ದರು.
 

- Advertisement -  - Advertisement - 
Share This Article
error: Content is protected !!
";