ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ, ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಸಂಸತ್ ನಲ್ಲಿ ನಿಗದಿಯಾಗಿದ್ದ
ಆಸನದಲ್ಲಿ ನೋಟುಗಳ ಕಂತೆ ಪತ್ತೆಯಾಗಿದ್ದು, ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಸಂಸತ್ತಿನಲ್ಲಿ ಸಿಕ್ಕಿರುವ ಹಣಕ್ಕೂ ಮುಡಾ ಹಗರಣಕ್ಕೂ ಏನಾದರೂ ಸಂಬಂಧವಿದೆಯಾ? ದೇಶದ ಅತ್ಯಂತ ದುಬಾರಿ ವಕೀಲರಲ್ಲಿ ಒಬ್ಬರು ಎಂಬ ಖ್ಯಾತಿ ಗಳಿಸಿರುವ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪರವಾಗಿ
ವಕಾಲತ್ತು ವಹಿಸಲು ಸಂಭಾವನೆ ನೀಡುತ್ತಿರುವುದು ಯಾರು? ಮುಖ್ಯಮಂತ್ರಿಗಳು ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಅಶೋಕ್ ಒತ್ತಾಯ ಮಾಡಿದ್ದಾರೆ.