ಡಿ.10ರಂದು ಶಿಕ್ಷಕರ ಸಹ-ಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇದೇ ಡಿಸೆಂಬರ್ 10ರಂದು ಬೆಳಿಗ್ಗೆ 10ಕ್ಕೆ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕ ವಿಭಾಗದಲ್ಲಿ ಭಾವಗೀತೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲಿ ಪಾಠೋಪಕರಣ (ಟಿಎಲ್ಎಂ) ತಯಾರಿಕೆ ಸ್ಪರ್ಧೆ,

ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ (ಸಾಮಾನ್ಯ), ರಸಪ್ರಶ್ನೆ ಸ್ಪರ್ಧೆ (ವಿಜ್ಞಾನ) ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";