ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರ ಕೃಷಿ ಚಟುವಟಿಕೆಗಳಿಗೆ ಕಿಸಾನ್‌ಸಮ್ಮಾನ್‌ಯೋಜನೆ ಮೂಲಕ ನೆರವಾದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಇದೀಗ ಕೃಷಿ ಸಾಲದ ಮಿತಿಯನ್ನು 2 ಲಕ್ಷಕ್ಕೆ ಏರಿಕೆ ಮಾಡಿ ರೈತರ ಮುಖದಲ್ಲಿ ಮಂದಹಾಸ ತರಿಸಿದೆ ಎಂದು ಬಿಜೆಪಿ ತಿಳಿಸಿದೆ.
ಅಡಮಾನ ರಹಿತ ಕೃಷಿ ಸಾಲದ ಮಿತಿಯನ್ನು ಕೇಂದ್ರ ಬಿಜೆಪಿ ಸರ್ಕಾರ ಈ ಹಿಂದೆ 1 ಲಕ್ಷದಿಂದ 1.6 ಲಕ್ಷಕ್ಕೆ ಏರಿಕೆ ಮಾಡಿತ್ತು. ಇದೀಗ ಮತ್ತೊಮ್ಮೆ 2 ಲಕ್ಷಕ್ಕೆ ಏರಿಸುವ ಮೂಲಕ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ಪಡೆಯಲು ಅನುಕೂಲ ಮಾಡಿಕೊಟ್ಟಿದೆ.
ರೈತರ ಶ್ರೇಯೋಭಿವೃದ್ಧಿಗೆ ಸದಾ ಮಿಡಿಯುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯಾವಾದಗಳನ್ನು ಅರ್ಪಿಸಿದ್ದಾರೆ.