ಬಿಜೆಪಿ ನಾಯಕ ಬಿ. ಎಲ್ ಸಂತೋಷ್, ರಾಜ್ಯ ಉಸ್ತುವಾರಿ ಡಾ.ರಾಧಾ ಮೋಹನ್ ದಾಸ್ ಭೇಟಿಯಾದ ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಹಿರಿಯ ಭಾರತೀಯ ಜನತಾ ಪಾರ್ಟಿ ಮುಖಂಡರು, ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ  ಸೌಹಾರ್ದಯುತವಾಗಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.

ಚನ್ನಪಟ್ಟಣ ವಿಧಾಸಭಾ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

 ಈ ಸಂದರ್ಭದಲ್ಲಿ ಸಂತೋಷ್ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಜೀವನ -ಸಾಧನೆ ಕುರಿತು furrows in a field: The unexplored life of H.D. deve gowda ಗ್ರಂಥವನ್ನು ನಿಖಿಲ್ ನೀಡಿ ಆಶೀರ್ವಾದ ಪಡೆದುಕೊಂಡರು.

ನನ್ನ ರಾಜಕೀಯ ಬೆಳವಣಿಗೆ ಹಾಗೂ ರಾಜ್ಯದಲ್ಲಿ NDA ಮೈತ್ರಿ ಕೂಟದ ಬಲವರ್ಧನೆ ದೃಷ್ಟಿಯಿಂದ ಕೆಲ ಮಹತ್ವದ ಸಲಹೆ ಸೂಚನೆಗಳನ್ನು ಅವರು ನೀಡಿದ್ದು, ಅವರ ಮಾರ್ಗದರ್ಶನಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ನಿಖಿಲ್ ಸ್ಮರಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";