ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ೨೦೨೫-೨೦೨೬ನೇ ಸಾಲಿನ ಕರಡು ಆಯವ್ಯಯ ಅಂದಾಜುಪಟ್ಟಿ ತಯಾರಿಸುವ ಸಂಬಂಧ ಪೂರ್ವಭಾವಿಯಾಗಿ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಜೊತೆಗೆ
೨ನೇ ಸಮಾಲೋಚನಾ ಸಭೆಯನ್ನು ನಗರಸಭಾ ಅಧ್ಯಕ್ಷ ಅಜಯ್ ಕುಮಾರ್ ಅಧ್ಯಕ್ಷತೆಯಲ್ಲಿ ಡಿಸೆಂಬರ್-೧೩ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಕರೆಯಲಾಗಿದೆ ಎಂದು ನಗರಸಭೆ ಪೌರಾಯುಕ್ತ ಎ.ವಾಸೀಂ ಮಾಹಿತಿ ನೀಡಿದ್ದಾರೆ.
ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಸಮಾಲೋಚನಾ ಸಭೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪತ್ರಕರ್ತರು, ಉದ್ಯಮಿಗಳು, ನಾಗರೀಕರು ಹಾಗೂ ಸಾರ್ವಜನಿಕರು ಸಕಾಲಕ್ಕೆ ಆಗಮಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಬಜೆಟ್ ಪೂರ್ವಭಾವಿ ಸಭೆ ಯಶಸ್ವಿಗೊಳಿಸಿಕೊಡಬೇಕೆಂದು ಎ.ವಾಸೀಂ ಮನವಿ ಮಾಡಿದ್ದಾರೆ.