Ad imageAd image

ಸಿದ್ದರಾಮಯ್ಯ ಅವರ ಕುಮ್ಮಕ್ಕಿನಿಂದಲೇ ಲಾಠಿ ಪ್ರಹಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯ ಅವರ ಕುಮ್ಮಕ್ಕಿನಿಂದಲೇ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಪ್ರಹಾರ ನಡೆದಿದೆ. ಸಿದ್ದರಾಮಯ್ಯ ಅವರು ಸಮಾಜಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಗಲಭೆ ಎಬ್ಬಿಸಲು ಮೊದಲೇ ಸಂಚು ರೂಪಿಸಿತ್ತು. ಘಟನೆಗೆ ಕಾರಣರಾದವರನ್ನು ಕೂಡಲೇ ಅಮಾನತುಗೊಳಿಸಬೇಕು.

ನಾವು ಅಧಿಕಾರದಲ್ಲಿದ್ದಾಗ ಮೀಸಲಾತಿ ನೀಡಿದ್ದೆವು. ನಾವು ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯಲಿ ಎಂದು ಬಿಜೆಪಿ ಆಗ್ರಹ ಮಾಡಿದೆ.

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ನಾಯಕರು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.

 

- Advertisement -  - Advertisement - 
Share This Article
error: Content is protected !!
";