ಡ್ರೋನ್ ಪ್ರತಾಪ್ ನನ್ನು ಸ್ಥಳ ಪರಿಶೀಲನೆಗೆ ಕರೆದೊಯ್ದ ಪೊಲೀಸರು

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಬಿಗ್‌ಬಾಸ್‌ರಿಯಾಲಿಟಿ ಶೋ ರನ್ನರ್‌ಅಪ್‌ಡ್ರೋನ್ ಪ್ರತಾಪ್ ಅವರನ್ನು ಘಟನೆ ನಡೆದ ಸ್ಥಳಕ್ಕೆ ಕರೆತಂದ ಪೊಲೀಸರು
, ಶುಕ್ರವಾರ ಸ್ಥಳ ಮಹಜರು ನಡೆಸಿದರು.

ಸ್ಫೋಟಕ ವಸ್ತುವನ್ನು ನೀರಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಬಂಧನದಲ್ಲಿರುವ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ತಾಲೂಕಿನ ಚಿನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರ್ಮ್ ಬಳಿ ಕರೆತಂದ ಪೊಲೀಸರು ಪರಿಶೀಲನೆ ನಡೆಸಿದರು.

ಡ್ರೋನ್​ ಪ್ರತಾಪ್ ಕೃಷಿ ಹೊಂಡಾದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದರು. ಅಷ್ಟೇ ಅಲ್ಲದೇ ಸ್ಫೋಟಗೊಂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ಸಂಬಂಧ ಯೂಟ್ಯೂಬ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿತ್ತು.

ಈ ವಿಡಿಯೋ ಆಧಾರವಾಗಿಟ್ಟುಕೊಂಡು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರತಾಪ್ ಮತ್ತು ಇತರ ಇಬ್ಬರನ್ನು ಬಂಧಿಸಿದ್ದರು. ಬಂಧನದ ಬಳಿಕ ಶುಕ್ರವಾರ ಸ್ಥಳಕ್ಕೆ ಕರೆತಂದು ಮಹಜರು ನಡೆಸಿದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಾಪ್, ಜಮೀನಿನ ಮಾಲೀಕ ಜಿತೇಂದ್ರ ಜೈನ್​ ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆ ಸೆಕ್ಷನ್ 176, ಸಿಆರ್‌ಪಿಸಿ 158 ಎ ಮತ್ತು ಬಿ ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿದ್ದ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಪೊಲೀಸರು ಗುರುವಾರ ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ಮುಂದುವರೆಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";