ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದರ ಅಂಗವಾಗಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿಯ ಕಾಂಗ್ರೆಸ್ ಬಾವಿಗೆ (ಪಂಪಾ ಸರೋವರ) ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.

