ಚಂದ್ರವಳ್ಳಿ ನ್ಯೂಸ್, ತುಮಕೂರು:
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಡಿಸೆಂಬರ್ ೨೦ ಮತ್ತು ೨೧ರಂದು ಬೆಳಿಗ್ಗೆ ೧೦ ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ ೨ ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ,
ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ ೦೮೧೬-೨೨೫೧೨೧೪ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.