ಚಂದ್ರವಳ್ಳಿ ನ್ಯೂಸ್, ನವದೆಹಲಿ:
ರಾಜ್ಯದಲ್ಲಿ ಅನುಷ್ಟಾನಗೊಳ್ಳುತ್ತಿರುವ ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಟಾನಕ್ಕಾಗಿ ಕೇಂದ್ರದ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ರೂ.೫೩೦೦ ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಬಿಜೆಪಿ ಸಂಸದರ ನಿಯೋಗ ಮನವಿ ಮಾಡಿತು.
ನಿಯೋಗದಲ್ಲಿ ಕೇಂದ್ರದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಲ್ಹಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಮತ್ತು ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಸದರ ನಿಯೋಗವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಮನವಿ ಮಾಡಿತು.